RIPPONPETE | ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಡೆಂಘೀ ಪ್ರಕರಣದೊಂದಿಗೆ ಒಂದೇ ವಾರದಲ್ಲಿ ಎರಡು ಜನರನ್ನು ಬಲಿ ಪಡೆದಿರುವ ರಿಪ್ಪನ್‌ಪೇಟೆಗೆ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎನ್.ನಟರಾಜ್ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪಕಸಬಿ ಭೇಟಿ ನೀಡಿ ಪಟ್ಟಣ ಸುತ್ತಮುತ್ತಲ ಬಡಾವಣೆಗಳಲ್ಲಿ ಪರ್ಯಟನೆ ಪರಿಶೀಲನೆ ನಡೆಸಿದರು.
ಪಟ್ಟಣದ ಗಾಂಧಿನಗರ, ಚೌಡೇಶ್ವರಿಬೀದಿ, ಸೇರಿದಂತೆ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಯ ಸುತ್ತಮುತ್ತ ಸ್ವಚ್ಚವಾಗಿಟ್ಟುಕೊಂಡು ಸೊಳ್ಳೆಗಳ ಉತ್ಪತ್ತಿಯಾಗದಂತೆ ನೋಡಿಕೊಳ್ಳಲು ತಿಳಿಸಿ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಕೈಗೊಳ್ಳುವಂತೆ ತಿಳಿಸಿದರು.
ಇಲಾಖೆ ಸಿಬ್ಬಂದಿವರ್ಗ ಲಾರ್ವ ಸಮೀಕ್ಷೆ ಮತ್ತು ಫಾಗಿಂಗ್ ಮಾಡಲು ಮನೆಗಳ ಬಳಿ ಬಂದಾಗ ಸಹಕರಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ತಾಲ್ಲೂಕ್ ಆರೋಗ್ಯಾಧಿಕಾರಿ ಡಾ.ಸುರೇಶ್, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ರಮೇಶ್ ಆಚಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಂಜನೇಯ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಧುಸೂದನ್, ಹಿರಿಯ ಆರೋಗ್ಯ ಕಾರ್ಯಕರ್ತೆ ಗಾಯಿತ್ರಿ, ಇನ್ನಿತರ ಆಸ್ಪತ್ರೆಯ ಸಿಬ್ಬಂದಿವರ್ಗ ಹಾಜರಿದ್ದರು.