ಹೊಸನಗರದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ | ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಬಿಜೆಪಿ-ಜೆಡಿಎಸ್ ಪಕ್ಷದವರು ಎಷ್ಟೇ ಕುತಂತ್ರ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೂ 4 ವರ್ಷಗಳ ಕಾಲ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಹೇಳಿದರು.

ಪಟ್ಟಣದಲ್ಲಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ರಾಜ್ಯಪಾಲರ ಪ್ರತಿಕೃತಿ ದಹಿಸುವ ಕಾರ್ಯಕ್ರಮ ಏರ್ಪಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಿಂದಿನ ಐದು ವರ್ಷ ಮುಖ್ಯಮಂತ್ರಿಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಆಡಳಿತ ನಡೆಸಿದ್ದಾರೆ ಇನ್ನೂ ಮುಂದೆ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರೇ ಬಿಜೆಪಿ ಹಾಗೂ ಜೆಡಿಎಸ್ ಹೆಸರಿಲ್ಲದಂತೆ ಹೋಗುತ್ತದೆ ಎಂಬ ಅರಿವಿನಿಂದ ಏನಾದರೂ ಮಾಡಿ ಸಿದ್ದರಾಮಯ್ಯನವರನ್ನು ಮೂಲೆ ಗುಂಪು ಮಾಡುವ ಉದ್ದೆಶದಿಂದ ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿಯವರು ಸಿದ್ದರಾಮಯ್ಯರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಹೋರಾಟ ಮಾಡುತ್ತಿದ್ದಾರೆ ಅವರ ಕನಸು ನನಸಾಗುವುದಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಬಲವರ್ಧನೆಯಾಗಿದೆ : ಕಲಗೋಡು ರತ್ನಾಕರ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಶಾಸಕರನ್ನು ಹೊಂದಿದೆ. ನಾವು ಈಗ ಕರ್ನಾಟಕದಲ್ಲಿ ಬಲಿಷ್ಠ ಪಕ್ಷವಾಗಿ ಆಡಳಿತ ನಡೆಸುತ್ತಿದ್ದೇವೆ ಬಿಜೆಪಿ-ಜೆಡಿಎಸ್ ಪಕ್ಷಗಳು ಏನೇ ಕುತಂತ್ರ ಮಾಡಿದರೂ ಇನ್ನೂ 4 ವರ್ಷಗಳ ನಮ್ಮ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷದಲ್ಲಿ 5 ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದೇವೆ. ಗ್ಯಾರಂಟಿ ಯೋಜನೆ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಈಗ ತಲೆ ನೋವಾಗಿ ಪರಿಣಾಮಿಸಿದೆ. ಏನಾದರೂ ಮಾಡಿ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ದುರುದ್ದೇಶದಿಂದ ಸುಳ್ಳು ಆಪಾದನೆ ಮಾಡಿ ರಾಜ್ಯಪಾಲರ ಮೂಲಕ ಪಿತೂರಿ ಮಾಡುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷ ಯಾರಿಗೂ ಜಗ್ಗಲ್ಲ, ಬಗ್ಗಲ್ಲ. ನಮ್ಮ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರೂ ಎಲ್ಲರೂ ಒಟ್ಟಾಗಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್‌ ಈ ಸಂದರ್ಭದಲ್ಲಿ ಹೇಳಿದರು.

ಈ ಬೃಹತ್ ಪತ್ರಿಭಟನೆ ಹೊಸನಗರದ ಪ್ರಮುಖ ಬೀದಿಗಳಲ್ಲಿ ರಾಜ್ಯಪಾಲರ ಹಾಗೂ ಬಿಜೆಪಿ, ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿ ಕೋರ್ಟ್ ಸರ್ಕಲ್ ಬಳಿ ರಾಜ್ಯಪಾಲರ ಪ್ರತಿಕೃತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು ಸುಮಾರು ಅರ್ಧ ಗಂಟೆ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು.

ಈ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಶ್ರೀನಿವಾಸ್ ಕಾಮತ್, ರಾಜಮೂರ್ತಿ, ಪ್ರಭಾಕರ್, ಹೆಚ್. ಮಹಾಬಲರಾವ್, ನೂರ ಮೇಟಿಲ್ಡಾ ಸಿಕ್ವೇರಾ, ತಾಲ್ಲೂಕು ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ನೇತ್ರಾ ಸುಬ್ರಾಯ ಭಟ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಅಶ್ವಿನಿಕುಮಾರ್, ಬೃಂದಾವನ ಪ್ರವೀಣ್, ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಎಂ.ಪಿ. ಸುರೇಶ್, ನಿತ್ಯಾನಂದ ಹೆಚ್.ಎಂ, ರಾಧಿಕಾ, ಕರುಣಾಕರ ಶೆಟ್ಟಿ, ಶಾಹಿನಾ, ನಾಸೀರ್ ಇನ್ನೂ ಮುಂತಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment

error: Content is protected !!