ಸರ್ಕಾರಿ ಶಾಲೆಗಳ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ ; ಶಾಸಕ ಬೇಳೂರು ಗೋಪಾಲಕೃಷ್ಣ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಸಾಗರ, ಹೊಸನಗರ ತಾಲ್ಲೂಕಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದು ನನ್ನ ಮುಖ್ಯ ಗುರಿಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಬಾಲಕಿಯರ ಪಾಠ ಶಾಲೆಯಲ್ಲಿ ಪಟ್ಲ ಫೌಂಡೇಷನ್ ಅಡಿಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮ ತಾಲ್ಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿದ್ದು ಈ ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲ ರೀತಿಯ ಸೌಲಭ್ಯ ನೀಡುವುದು ಶಾಲೆ ಬಿಟ್ಟ ಮಕ್ಕಳನ್ನು ಶಾಲೆಯತ್ತಾ ಬರಲು ಯಾವ ಕ್ರಮ ಕೈಗೊಳ್ಳಬೇಕು ಎಂಬುವುದರ ಬಗ್ಗೆ ಶಿಕ್ಷಕರೊಂದಿಗೆ ಕೈ ಜೋಡಿಸಿ ಶಾಲೆಗೆ ಕರೆ ತರುವುದೇ ನನ್ನ ಮುಖ್ಯ ಗುರಿಯಾಗಿದ್ದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಸರಿಯಾಗಿದೆಯೇ ಎಂಬುವುದನ್ನು ಮುಖ್ಯ ಶಿಕ್ಷಕರು ಜವಾಬ್ದಾರಿಯಿಂದ ನೋಡಿಕೊಳ್ಳುವುದು ಯಾವುದೇ ರೀತಿಯ ತೊಂದರೆಯಾಗದಂತೆ ಯಾವುದೇ ಖಾಸಗಿ ಶಾಲೆಗಳಿಗೂ ನಾವು ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಶಾಲೆಗಳನ್ನು ಅಭಿವೃದ್ಧಿ ಪಡಿಸಿ ಪೋಷಕರು ಸರ್ಕಾರಿ ಶಾಲೆಗಳತ್ತಾ ಮುಖ ಮಾಡುವಂತೆ ಶಿಕ್ಷಕರು ಮಾಡಬೇಕು ನಾನು ಶಾಸಕನಾಗಿ ಇರುವ ತನಕ ಪ್ರತಿಯೊಬ್ಬರು ವಿದ್ಯಾವಂತರನ್ನಾಗಿ ಮಾಡುವುದೇ ನನ್ನ ಉದ್ದೇಶವಾಗಿದೆ ಎಂದರು.

ಉತ್ತಮ ಶಿಕ್ಷಕರನ್ನು ಹೊಂದಿರುವ ಶಾಲೆ ಇದಾಗಿದೆ ; ರಮೇಶ್ ನೆರಲೆ

ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಬಾಲಕಿಯರ ಪ್ರಾಥಮಿಕ ಪಾಠ ಶಾಲೆಯಲ್ಲಿ ಒಟ್ಟು 380 ಕ್ಕಿಂತಲ್ಲೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇದರ ಜೊತೆಗೆ ಈ ಶಾಲೆಗೆ ಬೇಕಾಗುಷ್ಟು ಶಿಕ್ಷಕರನ್ನು ನಮ್ಮ ಕ್ಷೇತ್ರ ಶಿಕ್ಷನಾಧಿಕಾರಿ ಕೃಷ್ಣಮೂರ್ತಿಯವರು ನೀಡಿದ್ದಾರೆ. ನಮಗೆ ಶೌಚಾಲಯದ ಅಗತ್ಯವಿದ್ದು ಅದನ್ನು ನಮ್ಮ ಶಾಸಕ ಬೇಳೂರು ಗೋಪಾಲಕೃಷ್ಣರವರು ಸವಲತ್ತು ಒದಾಗಿಸಿದ್ದಾರೆ. ಶಾಲೆಯ ಕೊಠಡಿಗಳ ಕೊರತೆ ಇದ್ದು ಅದನ್ನು ಮುಂದಿನ ದಿನದಲ್ಲಿ ಶಾಸಕರು ನೀಡುವ ಭರವಸೆ ನೀಡಿದ್ದು ಎಸ್‌ಡಿಎಂಸಿ ಸದಸ್ಯರ ಸಹಕಾರದೊಂದಿಗೆ ಶಿವಮೊಗ್ಗ ಜಿಲ್ಲೆಯ ಶಾಲೆಗಳಲ್ಲಿ ಈ ಶಾಲೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಗುರಿ ಹೊಂದಿದ್ದೇವೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ನೆರಲೆ ಈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ರಶ್ಮಿ ಹಾಲೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಪಟ್ಲ ಫೌಂಡೇಶನ್ ಸಂಚಾಲಕ ನಗರ ರಾಘವೇಂದ್ರ, ಎಸ್‌ಡಿಎಂಸಿ ಅಧ್ಯಕ್ಷ ನೆರಲೆ ರಮೇಶ್, ಉಪಾಧ್ಯಕ್ಷೆ ರೋಹಿಣಿ, ಶೈಲಜಾ, ಮುಖ್ಯೋಪಾದಾಯ ಹರೀಶ್, ಸುಬ್ರಹ್ಮಣ್ಯ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ರಾಘವೇಂದ್ರ ಹೆಚ್.ಜಿ, ಪ್ರವೀಣ್, ಚಂದ್ರಶೇಖರ್, ವಿಜಯ, ನಾಸೀರ್ ಹಾಗೂ ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Comment

error: Content is protected !!