ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದ್ದು ಹವಾಮಾನ ಇಲಾಖೆಯಿಂದ (Meteorological Department) ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮೇ 21ರ ಮಂಗಳವಾರ ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi), ಚಿಕ್ಕಮಗಳೂರು (Chikkamagaluru), ಶಿವಮೊಗ್ಗ (Shivamogga), ಕೊಡಗು (Kodagu) ಮತ್ತು ಚಿತ್ರದುರ್ಗ (Chithradurga) ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 22ರ ಬುಧವಾರ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಈ ಐದು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.