RIPPONPETE | ಈ ಗ್ರಾಪಂ ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

Written by Malnadtimes.in

Published on:

WhatsApp Group Join Now
Telegram Group Join Now

RIPPONPETE | ಇಲ್ಲಿನ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಪಂ ವ್ಯಾಪ್ತಿಗಳಲ್ಲಿ ಆ‌‌.27 ರಂದು ಬೆಳಿಗ್ಗೆ 9:30 ರಿಂದ ಸಂಜೆ 6:00ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ ?

ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬಾಳೂರು, ಬೆಳ್ಳೂರು, ಅರಸಾಳು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.

Leave a Comment

error: Content is protected !!