RIPPONPETE | ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ರಿಪ್ಪನ್ಪೇಟೆ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಆರೋಪಿ ಹರತಾಳು ಗ್ರಾಮದ ಉಮೇಶ್ ಎಂಬಾತ ಅಪ್ರಾಪ್ತೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಕಳೆದ ಕೆಲ ದಿನಗಳಿಂದ ಉಮೇಶನ ಮನೆಯಲ್ಲೇ ವಾಸವಿದ್ದಳು ಎನ್ನಲಾಗಿದೆ.
ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಸಂಬಂಧಿಸಿ ದಾಖಲಾತಿ ಒದಗಿಸುವ ಸಮಯದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ಆಸ್ಪತ್ರೆ ಸಿಬ್ಬಂದಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಒಂದು ವರ್ಷದ ಹಿಂದೆ ಇದೇ ಅಪ್ರಾಪ್ತೆ ಮೇಲೆ ಇನ್ನೊಬ್ಬ ಯುವಕನಿಂದ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ದಾಖಲಾಗಿತ್ತು. ಇದು ಈಕೆಯ ಮೇಲೆ ಸಂಭವಿಸಿರುವ 2ನೇ ಪ್ರಕರಣವಾಗಿದೆ.