SSLCಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಅಂಕಿತಾಗೆ ಅಭಿನಂದನೆ ಸಲ್ಲಿಸಿದ ಸಚಿವ ಮಧು ಬಂಗಾರಪ್ಪ

Written by Malnadtimes.in

Published on:

WhatsApp Group Join Now
Telegram Group Join Now

ಶಿವಮೊಗ್ಗ : ಸರ್ಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ತಂದು ಇಲಾಖೆಗೆ ಕೀರ್ತಿ ತಂದಿದ್ದಾರೆ, ಅವರಿಗೆ ಮತ್ತು ಶಾಲಾ ಶಿಕ್ಷಕರಿಗೆ, ಆಡಳಿತ ಮಂಡಳಿಗೆ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದು ಪ್ರೌಢಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದೊಂದು ಚಾಲೆಂಜಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂದರು.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/MmPkPtUTpPxmqYsd/?mibextid=w8EBqM

ಶಿಕ್ಷಣ ಇಲಾಖೆಯಲ್ಲಿ ಈ ಬಾರಿ ಅನೇಕ ಬದಲಾವಣೆಯಾಗಿದೆ. ಪೌಷ್ಠಿಕ ಆಹಾರ ನೀಡುತ್ತಿದ್ದೇವೆ. ಪಠ್ಯಗಳ ಬದಲಾವಣೆಯಾಗಿದೆ. ಶಿಕ್ಷಕರ ನೇಮಕಾತಿಯಾಗಿದೆ, ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ. ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಕೊಟ್ಟಿದ್ದೇವೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಕಡಿಮೆ ಅಂಕಗಳಿಸಿದ ಮತ್ತು ಅನ್ನುರ್ತೀಣರಾದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಇನ್ನೆರಡು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ ಎಂದರು.

ಶೇ.20 ಗ್ರಾಮೀಣ ಕೃಪಾಂಕ ನೀಡಿದ್ದೇವೆ. ಇವೆಲ್ಲದರ ಪರಿಣಾಮ ಉತ್ತಮ ಫಲಿತಾಂಶ ಬಂದಿದೆ. ಪರೀಕ್ಷೆಯನ್ನು ಬಿಗಿಯಾಗಿ ಪಾರದರ್ಶಕವಾಗಿ ನಡೆಸಿದ್ದರಿಂದ ರಾಜ್ಯದಲ್ಲಿ 75 ಶಾಲೆಗಳು ಶೂನ್ಯ ಫಲಿತಾಂಶ ಬಂದಿದ್ದರು ಸಹ, ಇನ್ನೆರಡು ಅವಕಾಶ ಕಲ್ಪಿಸಿದ್ದೇವೆ. ಈಗ ಬಿಗಿ ಮಾಡಿದ್ದರ ಪರಿಣಾಮ ಮುಂದಿನ ಉನ್ನತ ಶಿಕ್ಷಣಕ್ಕೆ ಅವರ ಭವಿಷ್ಯ ಉಜ್ವಲವಾಗಲಿದೆ. ಅನೇಕ ಪೋಷಕರು ಪರೀಕ್ಷೆಗಳ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗಾಗಿ ಈ ಬಾರಿ ಅನೇಕ ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.

ಈ ಬಾರಿ 7 ಸಾವಿರ ಕೋಟಿ ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಅನುದಾನ ನೀಡಿದ್ದಾರೆ. ಶಾಲೆಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. 3 ವರ್ಷದಲ್ಲಿ 3 ಸಾವಿರ ಕೆ.ಪಿ.ಎಸ್. ಶಾಲೆಗಳನ್ನು ಮಾಡಿ ಮೇಲ್ದರ್ಜೆಗೆ ಏರಿಸುತ್ತೇವೆ. ಶಿವಮೊಗ್ಗ ಜಿಲ್ಲೆ 28ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಬಡ್ತಿ ಪಡೆದಿರುವುದು ಸಂತೋಷ ತಂದಿದೆ. ಶಿಕ್ಷಣ ಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಅನೇಕರು ನನ್ನ ಬಗ್ಗೆ ಕೆಟ್ಟದಾಗಿ ಟ್ರೋಲ್ ಮಾಡುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿ ಸಮಯ ವ್ಯರ್ಥ ಮಾಡುವುದಿಲ್ಲ, ಟ್ರೋಲ್ ಮಾಡುವವರು ಜೀವನದಲ್ಲಿ ಉದ್ಧಾರವಾಗುವುದಿಲ್ಲ ಎಂದರು.

ಶಿವಮೊಗ್ಗದಲ್ಲಿ ಗ್ಯಾಂಗ್‌ವಾರ್‌ಗೆ 3 ಬಲಿಯಾಗಿದೆ. ಸ್ಥಳೀಯ ಶಾಸಕರು ಪೊಲೀಸ್ ವೈಫಲ್ಯ ಎಂದು ದೂರಿದ್ದಾರೆ ಎಂಬ ಪ್ರಶ್ನೆಗೆ ಆ ಶಾಸಕರ ಬಗ್ಗೆ ಹೆಚ್ಚಾಗಿ ಏನು ಹೇಳುವುದಿಲ್ಲ. ಆದರೆ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇನೆ. ಈಗಾಗಲೇ ಸೂಕ್ತ ಕ್ರಮಕೈಗೊಂಡಿದ್ದಾರೆ. 19 ಜನರ ಬಂಧನವಾಗಿದೆ. ಹಾಗೇನಾದರೂ ವೈಫಲ್ಯಗಳಿದ್ದಲ್ಲಿ ಅಥವಾ ಇಲಾಖೆಗೆ ಮೊದಲೇ ಸುಳಿವು ಗೊತ್ತಿದ್ದು, ಕ್ರಮ ಕೈಗೊಂಡಿಲ್ಲವಾಗಿದ್ದರೆ ತಪ್ಪಿತಸ್ಥರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳುತ್ತೇನೆ ಎಂದರು.

ಬಿಜೆಪಿ ನಾಯಕ ಅಣ್ಣಾಮಲೈಅವರು ನನ್ನ ಬಗ್ಗೆ ಟ್ವೀಟ್ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಆತನೊಬ್ಬ ಆಯೋಗ್ಯ ರಾಜ್ಯದ ಪೆನ್ಶನ್ ಪಡೆದು ಅಲ್ಲಿ ಹೋಗಿ ರಾಜಕೀಯ ಮಾಡುತ್ತಾರೆ ಎಂದು ಹರಿಹಾಯ್ದರು.

ನೈರುತ್ಯ ಪದವೀಧರಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ಪಕ್ಷ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳಲಿದೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದರು.

ಸುದ್ಧಿಗೋಷ್ಠಿಗೂ ಮುನ್ನ ಸಚಿವರು ರಾಜ್ಯದ ಎಸ್‌ಎಸ್‌ಎಲ್‌ಸಿ ಟಾಪರ್ ಅಂಕಿತ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಜಿತೇಂದ್ರ, ಶಮಂತ್, ಪದ್ಮನಾಭ್, ಶಿ.ಜು.ಪಾಶ, ಜಿ.ಡಿ.ಮಂಜುನಾಥ್, ಅನ್ನೀಸ್ ಇದ್ದರು.

Leave a Comment

error: Content is protected !!