ರಕ್ತದಾನದಿಂದ ಜೀವ ಉಳಿಸಲು ಸಾಧ್ಯ ; ಡಾ. ಆಂಜನೇಯ

Written by Malnadtimes.in

Published on:

WhatsApp Group Join Now
Telegram Group Join Now

RIPPONPETE | ರಕ್ತದಾನ ಮಹಾಪುಣ್ಯ ದಾನ. ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಬಹುದು. ಪ್ರಪಂಚದಲ್ಲಿ ವಿಜ್ಞಾನಿಗಳು ಇದುವರೆಗೂ ಕೃತಕ ರಕ್ತವನ್ನು ಕಂಡು ಹಿಡಿಯಲ್ಲಿಲ್ಲ. ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಒಬ್ಬ ವ್ಯಕ್ತಿಯಿಂದಲೇ ಮಾತ್ರ ಇನ್ನೊಬ್ಬರಿಗೆ ರಕ್ತ ನೀಡ ಜೀವ ಉಳಿಸಲು ಸಾಧ್ಯ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಬಹುದೆಂದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಆಂಜನೇಯ ಹೇಳಿದರು.

ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗ್ರಾಮ ಪಂಚಾಯಿತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರಕ್ತನಿಧಿ ಸಿಮ್ಸ್ ಇವರ ಸಹಯೋಗದಲ್ಲಿ “ಸ್ವಯಂ ಪ್ರೇರಿತ ರಕ್ತದಾನ’’ ಶಿಬಿರದಲ್ಲಿ ರಕ್ತದಾನ ಮಾಡಿ ಮಾತನಾಡಿದರು.

ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಬಾಸ್ಟಿನ್‌ ಮ್ಯಾಥ್ಯೂಸ್, ಗಣೇಶ್ ಎನ್.ಕಾಮತ್, ಜೆ.ರಾಧಾಕೃಷ್ಣ, ಎಂ.ಬಿ.ಮಂಜುನಾಥ, ನಾಗಾರ್ಜುನಸ್ವಾಮಿ, ಲೀಲಾ ಶಂಕರ್, ವಾಣಿ ಗೋವಿಂದಪ್ಪಗೌಡ, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಆಶಾ ಕಾರ್ಯಕರ್ತೆ ಪದ್ಮಾ, ಶೈಲಾ ಆರ್.ಪ್ರಭು, ರೋಟರಿಯನ್ ಆರ್.ಗಣೇಶ್, ರೋಟರಿಯನ್ ದೀಪಾ ಗಣೇಶ್ ಇನ್ನಿತರರು ಪಾಲ್ಗೊಂಡಿದ್ದರು.

78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ :

78ನೇ ಸ್ವಾತಂತ್ರ್ಯೋತ್ಸವವನ್ನು ರಿಪ್ಪನ್‌ಪೇಟೆಯ ವಿವಿಧೆಡೆಗಳಲ್ಲಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು.

ಗ್ರಾಮ ಪಂಚಾಯತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕಿ ಸುಮಿತ್ರ, ರೈತ ಸಂಪರ್ಕ ಕೇಂದ್ರದಲ್ಲಿ ಶರಣಗೌಡ ಬಿರದಾರ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಆಂಜನೇಯ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕಿ ಇಂದಿರಾ, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರಾಚಾರ್ಯ ವಾಸುದೇವ, ಸಿಡಿಸಿ ಉಪಾಧ್ಯಕ್ಷ ಜಿ.ಆರ್.ಗೋಪಾಲಕೃಷ್ಣ, ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಪ್ರಾಚಾರ್ಯ ಡಾ.ಹೆಚ್.ಎನ್.ವಿರೂಪಾಕ್ಷಪ್ಪ, ಅರಸಾಳು ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ ವಲಯ ಅರಣ್ಯಾಧಿಕಾರಿ ಬಾಬು ರಾಜೇಂದ್ರಪ್ರಸಾದ್, ಮೇರಿಮಾತಾ ಪ್ರೌಢಶಾಲೆಯಲ್ಲಿ ಗುಡ್‌ಶಫರ್ಡ್ ಶಾಲೆಯಲ್ಲಿ ಶ್ರೀಗುರುಬಸವೇಶ್ವರ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಾರಾದ ರಾಮಕೃಷ್ಣ ವಿದ್ಯಾಲಯದಲ್ಲಿ ಆಯಾಯ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸರ್ಕಾರಿ ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ.ದಯಾನಂದ, ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ, ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷ ಹಸನಬ, ಮೂಗುಡ್ತಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ ವಲಯ ಅರಣ್ಯಾಧಿಕಾರಿ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು.

ನಂತರ ವಿವಿಧ ಶಾಲಾ ವಿದ್ಯಾರ್ಥಿಗಳ ಪಥಸಂಚಲನ ಊರಿನ ಪ್ರಮುಖ ಬೀದಿಯಲ್ಲಿ ಜಯಘೋಷಣೆಯೊಂದಿಗೆ ಜನಾರ್ಕಷಣೆಗೊಳಿಸಿತು.

Leave a Comment

error: Content is protected !!