ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ-ಯು.ಕೆ.ಜಿ ಆರಂಭ, ಅಂಗನವಾಡಿ ಕಾರ್ಯಕರ್ತೆಯರಿಂದ ಜೂ‌.24ರಂದು ಬೆಂಗಳೂರು ಚಲೋ ; ಎನ್ ರವೀಂದ್ರ ಸಾಗರ್

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಆರಂಭಕ್ಕೆ ಸರ್ಕಾರ ಆದೇಶಿಸಿದ್ದು ಇದನ್ನು ವಿರೋಧಿಸಿ ಜೂನ್ 24 ಸೋಮವಾರ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯ ಸಮಿತಿಯ ಸಂಚಾಲಕರಾದ ಎನ್ ರವೀಂದ್ರ ಸಾಗರ್‌ ತಿಳಿಸಿದರು.

ಅವರು ತಮ್ಮ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ದೇಶಾದ್ಯಂತ ಕಳೆದ 49 ವರ್ಷಗಳ ಹಿಂದೆ ಪ್ರಾರಂಭವಾಗಿರುವ ಸಮಗ್ರ ಅಭಿವೃದ್ಧಿ ಯೋಜನೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿ, ಬಾಣಂತಿಯರು ಮತ್ತು ಆರು ತಿಂಗಳಿಂದ ಆರು ವರ್ಷದ ವಯೋಮಾನದ ಮಕ್ಕಳಿಗೆ ಆರೋಗ್ಯ ಲಾಲನೆ, ಪಾಲನೆ, ಪೋಷಣೆ, ಕ್ರೀಡೆ ಕಲಿಕಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತದೆ.

ದೇಶದಲ್ಲಿ 29 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಿದ್ದು ರಾಜ್ಯದಲ್ಲಿಯೂ ಸಹ ಸುಮಾರು 70 ಸಾವಿರ ಅಂಗನವಾಡಿ ಕೇಂದ್ರಗಳು ಮಹಿಳೆಯರ ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಂಗನವಾಡಿ ಕೇಂದ್ರಗಳು ಮತ್ತಷ್ಟು ಬಲವರ್ಧನೆಗೊಳಿಸುವ ಉದ್ದೇಶದಿಂದ ಹೋರಾಟ ಅನಿವಾರ್ಯವಾಗಿದೆ ಎಂದರು.

ರಾಜ್ಯ ಸರ್ಕಾರ ಇತ್ತೀಚಿನ ಕೆಲವು ವರ್ಷಗಳಲ್ಲಿ ಅಂಗನವಾಡಿ ಕೇಂದ್ರಗಳ ಶಾಲಾ ಪೂರ್ವ ಶಿಕ್ಷಣ ವ್ಯವಸ್ತೆಗೆ ಧಕ್ಕೆ ತರುವಂತಹ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು ಸರ್ಕಾರದ ವಿವಿಧ ಇಲಾಖೆಗಳಾದ ಕಾರ್ಮಿಕ, ಗ್ರಾಮೀಣ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಶಿಶುಪಾಲನ ಕೆಂದ್ರದ ಕೂಸಿನ ಮನೆ ಶಾಲೆಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಇತ್ಯಾದಿ ಬೇರೆ-ಬೇರೆ ಹೆಸರುಗಳಲ್ಲಿ ತರಗತಿ ಪ್ರಾರಂಭಿಸಿ ಅಂಗನವಾಡಿ ವ್ಯವಸ್ಥೆಗೆ ಧಕ್ಕೆಯುಂಟಾಗುತ್ತದೆ. ಪ್ರತಿಯಾಗಿ ಶಿಶುಪಾಲನ ಕೇಂದ್ರ ಹಾಗೂ ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ ಈಗಾಗಲೇ ಸರ್ಕಾರ ಆರಂಭಿಸಿರುವ ಪಬ್ಲಿಕ್ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿಗಳನ್ನು ನಡೆಸಲಾಗುತ್ತಿದೆ ಈ ಎಲ್ಲಾ ಪ್ರಕ್ರಿಯೆಗಳಿಂದಾಗಿ ಅಂಗನವಾಡಿ ಕೇಂದ್ರಗಳಿಗೆ ದಾಖಲಾಗಬೇಕಾದ 3 ರಿಂದ ಆರು ವರ್ಷದೊಳಗಿನ ವಯೋಮಾನದ ಮಕ್ಕಳು ವಿಘಟಿತರಾಗಿ ಶಾಸನಾತ್ಮಕವಾಗಿ ರೂಪಿತಗೊಂಡಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸವಲತ್ತುಗಳಿಂದ ವಂಚಿತರಾಗಲಿದ್ದಾರೆ ಹಾಗೂ ಅಂಗನವಾಡಿ ಕೆಂದ್ರಗಳಲ್ಲಿ ಮಕ್ಕಳ ಸಂಖ್ಯೆಯು ಕ್ಷೀಣಿಸಿ ಅಂಗನವಾಡಿ ವ್ಯವಸ್ತೆ ದುರ್ಬಲಗೊಂಡು ಅಸ್ಥವ್ಯಸ್ಥಗೊಳ್ಳುವ ಅಪಾಯ ಎದುರಾಗಿದೆ ಅಲ್ಲದೇ ಅಂಗನವಾಡಿ ಕೇಂದ್ರಗಳು ನಿರ್ವಹಿಸಬೇಕಾದ ಕೆಲಸವನ್ನು ಶಿಕ್ಷಣ ಇಲಾಖೆ ಕಾರ್ಮಿಕ ಇಲಾಖೆಗಳು ಒಂದೇ ವಯಸ್ಸಿನ ಮಕ್ಕಳಿಗೆ ತರಗತಿ ತೆರೆಯುವುದರಿಂದ ಸರ್ಕಾರ ಆರ್ಥಿಕ ಹೊರೆಯಾಗಿ ಅನಗತ್ಯವಾಗಿ ಸರ್ಕಾರಿ ಹಣ ಪೋಲಾಗಲಿದೆ ಈಗಾಗಲೇ ಕೇಂದ್ರ ಸರ್ಕಾರದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಅಂಗನವಾಡಿಗಳನ್ನು ಶಾಲಾ ಪ್ರಾಂಗಣಕ್ಕೆ ಸೇರಿಸಬೇಕೆಂಬ ಶಿಫಾರಸ್ಸುಗಳು ಸೇರಿದಂತೆ ಅದರಲ್ಲಿರುವ ಹಲವಾರು ನ್ಯೂನ್ಯತೆ ಜನ ವಿರೋಧಿ ಅಂಶಗಳನ್ನು ಗುರುತಿಸಿ ರಾಜ್ಯದಲ್ಲಿ ಎನ್‌ಇಪಿಯನ್ನು ಜಾರಿಗೊಳಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಎನ್‌ಇಪಿಗೆ ಪ್ರತಿಯಾಗಿ ರಾಜ್ಯದಲ್ಲಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ತೀರ್ಮಾನಿಸಿ ಅದಕ್ಕಾಗಿ ಸಮಿತಿಯೊಂದನ್ನು ರಚಿಸಲಾಗಿದೆ ಈ ಸಮಿತಿಯು ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 3 ರಿಂದ 6ವರ್ಷಗಳ ಮಕ್ಕಳನ್ನು ಒಳಗೊಂಡ ಮಕ್ಕಳಿಗೆ ಎಲ್.ಕೆ.ಜಿ, ಯು.ಕೆ‌.ಜಿ ಪ್ರಾರಂಭಿಸಲು ಹೊರಟಿದ್ದು ಇದರ ವಿರುದ್ದವಾಗಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಸಿದ್ದರಾಗಿದ್ದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 700 ಅಂಗನವಾಡಿ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಪತ್ರಿಕಾಘೋಷ್ಠಿಯಲ್ಲಿ ಅಂಗನವಾಡಿ ಜಿಲ್ಲಾಧ್ಯಕ್ಷೆ ವಿಶಾಲಾಕ್ಷಿ, ಸುಶೀಲಬಾಯಿ, ವೇದಾವತಿ, ಪುಷ್ಪಾ, ಶಶಿಕಲಾ, ಗಾಯಿತ್ರಿ ಹೆಗಡೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment

error: Content is protected !!