ಸಿಡಿಲು ಬಡಿದು ಮೇಯಲು ಬಿಟ್ಟಿದ್ದ ಎತ್ತು ಸಾವು !

Written by Malnadtimes.in

Published on:

WhatsApp Group Join Now
Telegram Group Join Now

ಸೊರಬ : ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು (Rain) ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು (Bul) ಮೃತಪಟ್ಟ ಘಟನೆ ನಡೆದಿದೆ.

ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು. ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.

ಸೊರಬ
ಸೊರಬ

ಮೃತ ಎತ್ತಿನ ಸಾವಿನಿಂದ ರೈತನಿಗೆ ಸುಮಾರು 55 ಸಾವಿರ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಆಯನೂರು ಮಂಜುನಾಥ್ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸೋಣ ; ಬೇಳೂರು ಗೋಪಾಲಕೃಷ್ಣ

Arecanut Today Price | 17.05.2024 | ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್…

Leave a Comment

error: Content is protected !!