ಶಿವಮೊಗ್ಗ:ಕಳೆದ ಮೂರು ತಿಂಗಳ ಅವಧಿಯಲ್ಲಿ ಅಂದಾಜು ₹16,35,000 ಮೌಲ್ಯದ ಒಟ್ಟು 110 ಕಳುವಾದ ಮೊಬೈಲ್ ಫೋನ್ಗಳನ್ನು ಶಿವಮೊಗ್ಗ ಪೊಲೀಸರು ಪತ್ತೆಹಚ್ಚಿದ್ದಾರೆ. ಇಂದು (ಜುಲೈ 29, 2024) ದಿನದಂದು ನಗರದ ಡಿಇಆರ್ ಪೊಲೀಸ್ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ಫೋನ್ಗಳನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಲಾಯಿತು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಜಿ.ಕೆ., ಐಪಿಎಸ್ ರವರು ಪತ್ತೆಯಾದ ಮೊಬೈಲ್ ಫೋನ್ಗಳನ್ನು ಮಾಲೀಕರಿಗೆ ಸ್ವತಃ ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್ ಅವರು, “ಜನರು ಮೊಬೈಲ್ ಕಳುವಾದ ತಕ್ಷಣ ಪೋಲಿಸ್ ಠಾಣೆಗೆ ದೂರು ನೀಡಬೇಕು. ನಮಗೆ ಲಭ್ಯವಿರುವ ತಂತ್ರಜ್ಞಾನ ಮತ್ತು ವಿಶೇಷ ತಂಡಗಳ ಸಹಾಯದಿಂದ ಹೆಚ್ಚಿನ ಸಂಖ್ಯೆಯ ಕಳುವಾದ ಮೊಬೈಲ್ಗಳನ್ನು ಪತ್ತೆಹಚ್ಚುವುದು ಸಾಧ್ಯವಾಗಿದೆ,” ಎಂದರು.
ಮೊಬೈಲ್ ಫೋನ್ ಗಳು ಕಳೆದು ಹೋದರೆ ಠಾಣೆಗೆ ಭೇಟಿ ನೀಡದೆ ಸ್ವತಹ ತಾವೇ ಕೆಎಸ್ಪಿ ಅಪ್ಲಿಕೇಶನ್ ನ ಈ ಲಾಸ್ಟ್ ಆಪ್ ಮೂಲಕ ದೂರು ದಾಖಲಿಸಿ ಸ್ವೀಕೃತಿಯನ್ನು ಪಡೆದು https://www.ceir.gov.in ವೆಬ್ ಪೋರ್ಟಲ್ ಭೇಟಿ ನೀಡಿ block stolen/Lost Mobile ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಫಾರಂನಲ್ಲಿ ಕಳೆದು ಹೋದ ಮೊಬೈಲ್ ಫೋನಿನ IMEI ನಂಬರ್ ಮೊಬೈಲ್ ನಂಬರ್ ಮತ್ತು ಅಗತ್ಯ ವಿವರಗಳನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವ ಮೂಲಕ ದೂರನ್ನು ದಾಖಲಿಸಬಹುದಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ
“ಮಾಧ್ಯಮ ಒಂದು ಶಕ್ತಿ – ನಿಷ್ಪಕ್ಷಪಾತ ಸುದ್ದಿಯೇ ನಮ್ಮ ಧ್ಯೇಯ” ಎಂಬ ಧೋರಣೆಯೊಂದಿಗೆ, ನಾನು 7 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದೇನೆ. ಸ್ಥಳೀಯ ಸುದ್ದಿಗಳಿಂದ ಅಂತಾರಾಷ್ಟ್ರೀಯ ವಿಷಯಗಳವರೆಗೆ, ನಿಖರವಾದ ವರದಿ ಮತ್ತು ಪ್ರಾಮಾಣಿಕ ಮಾಹಿತಿಯನ್ನೇ ಒದಗಿಸಲು ನಮ್ಮ ಪ್ಲಾಟ್ಫಾರ್ಮ್ ಆರಂಭಿಸಲಾಗಿದೆ.ಜವಾಬ್ದಾರಿ ಹಾಗೂ ನೈತಿಕತೆ ಪ್ರಧಾನ ಗುರಿಗಳಾಗಿದ್ದು, truth-first journalism ನಮ್ಮ ಧ್ಯೇಯ.