ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Written by Malnadtimes.in

Updated on:

WhatsApp Group Join Now
Telegram Group Join Now

SHIVAMOGGA | ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ, ಕಾಲೇಜುಗಳಿಗೆ ಗುರುವಾರ (ಜು.18) ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

ಹೊಸನಗರ, ಸಾಗರ, ತೀರ್ಥಹಳ್ಳಿ ಮತ್ತು ಸೊರಬ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದರಿಂದ ನಿನ್ನೆಯೇ ರಜೆ ಘೋಷಿಸಲಾಗಿತ್ತು. ಆದರೆ, ಶಿವಮೊಗ್ಗ, ಭದ್ರಾವತಿ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದರಿಂದ ರಜೆ ಘೋಷಣೆ ಆಗಿರಲಿಲ್ಲ. ಆದರೆ ಕಳೆದ ರಾತ್ರಿಯಿಂದ ಜಿಲ್ಲಾದ್ಯಂತ ನಿರಂತರ ಮಳೆಯಾಗುತ್ತಿದೆ‌ ಹಾಗೂ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಇಂದು ರೆಡ್‌ ಅಲರ್ಟ್‌ ಪ್ರಕಟಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Leave a Comment

error: Content is protected !!