ಭದ್ರಾ ಜಲಾಶಯ ಭರ್ತಿಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ; ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Written by Malnadtimes.in

Published on:

WhatsApp Group Join Now
Telegram Group Join Now

SHIVAMOGGA | ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗಳು ಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ಹೇಳಿದರು.

ಅವರು ಇಂದು ಬಿ ಆರ್ ಪಿ ಯಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮವಾಗಿ ರೈತರ ಆತಂಕದ ಛಾಯೆ ಉಂಟಾಗಿತ್ತು ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ, ಅದರಲ್ಲೂ ವಿಶೇಷವಾಗಿ ತೋಟಗಾರಿಕೆಯ ಎರಡು ಬೆಳೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ ಎಂದವರು ನುಡಿದರು.

ಈ ಜಲಾಶಯದ ವ್ಯಾಪ್ತಿಗಳು ಕೊಡುವ ಅಚ್ಚುಕಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ ಆಗಮಿಸಿದ್ದ ಅಧಿಕಾರಿಗಳು, ಗಣ್ಯರು ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Leave a Comment

error: Content is protected !!