ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಯುವಕ ಸಾವು !

Written by Malnadtimes.in

Published on:

WhatsApp Group Join Now
Telegram Group Join Now

SHIVAMOGGA ; ಶಿವಮೊಗ್ಗ ತಾಲೂಕಿನ ಗುತ್ತಿಹಳ್ಳ ಬಳಿ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಜುನಾಥ್ ಗದ್ದೆಮನೆ (27) ಮೃತ ದುರ್ದೈವಿ. ಶಿವಮೊಗ್ಗ ತಾಲೂಕಿನ ಸಂಪಿಗೆಹಳ್ಳ ನಿವಾಸಿಯಾದ ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಹೆಚ್ಚಿನ ಚಿಕಿತ್ಸೆಗೆ ಮಂಜುನಾಥ್ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರಿಗೂ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

Leave a Comment

error: Content is protected !!