SHIVAMOGGA | ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ನ ಗೀತಾ ಶಿವರಾಜ್ಕುಮಾರ್ ರವರಿಗೆ ಭಾರಿ ಹಿನ್ನಡೆಯಾಗಿದೆ. 89309 ಮತಗಳಿಂದ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಈವರೆಗೆ 10ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಯಾರಿಗೆ ಎಷ್ಟು ಮತ ?
- ಬಿಜೆಪಿ : ಬಿ.ವೈ.ರಾಘವೇಂದ್ರ – 302114 ಮತಗಳು
- ಕಾಂಗ್ರೆಸ್ : ಗೀತಾ ಶಿವರಾಜ್ಕುಮಾರ್ – 212805 ಮತಗಳು
- ಪಕ್ಷೇತರ : ಕೆ.ಎಸ್.ಈಶ್ವರಪ್ಪ – 11810 ಮತಗಳು