ಎಲ್ಲರೂ ಸೇರಿ ಹಬ್ಬದ ರೀತಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಿರಿ ; ಸಚಿವ ಮಧು ಬಂಗಾರಪ್ಪ

Written by Malnadtimes.in

Published on:

WhatsApp Group Join Now
Telegram Group Join Now

SHIVAMOGGA ; ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರಜಾಪ್ರಭುತ್ವ ದಲ್ಲಿರುವ ಎಲ್ಲರೂ ಸೇರಿ ಹೆಮ್ಮೆಯಿಂದ ಹಬ್ಬದ ರೀತಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಕರೆ ನೀಡಿದರು.

ಶಂಕರ ಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ ಸೆ.15 ರಂದು ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲೂ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಗೆ ಮಾರ್ಗನಕ್ಷೆ ನೀಡಲಾಗಿದ್ದು ಅದರಂತೆ ಭದ್ರಾವತಿ ತಾಲ್ಲೂಕು ಕಾರೇಹಳ್ಳಿಯಿಂದ ಶಿವಮೊಗ್ಗ ತಾಲ್ಲೀಕಿನ ಮಡಿಕೆಚೀಲೂರುವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು.
ಮಾನವ ಸರಪಳಿ ನಿರ್ಮಿಸಲು 50 ಸಾವಿರ ಜನರ ಅಗತ್ಯವಿದ್ದು ವಿದ್ಯಾರ್ಥಿಗಳನ್ನು ಸಹ ತೊಡಗಿಸಿಕೊಳ್ಳಲಾಗುವುದು.
ತಹಶಿಲ್ದಾರರ, ಇಓ ಸಿಡಿಪಿಒ ಗಳು ಸೇರಿದಂತೆ ಎಲ್ಲ ಇಲಾಖೆಯವರನ್ನು ಒಳಗೊಂಡು ಯೋಜಿಸಿ, ಸಂಘ ಸಂಸ್ಥೆಗಳ ಸಭೆ ಕರೆದು ಸಹಯೋಗ ಕೋರಲಾಗುವುದು ಎಂದರು.

ಜಿ.ಪಂ. ಸಿಇಓ ಎನ್.ಹೇಮಂತ್ ಮಾತನಾಡಿ, ಎಸ್ ಎ ಜಿ‌ ಗುಂಪಿನ ಮಹಿಳೆಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ವಿಶೇಷ ಗ್ರಾಮ ಸಭೆ ಮಾಡಿ ಜನರನ್ನು ಕರೆ ತರಲಾಗುವುದು ಎಂದರು.

ಉಸ್ತುವಾರಿ ಸಚಿವರು ಮಾತನಾಡಿ, 50 ಲಕ್ಷ ಜನ ಮಾನವ ಸರಪಳಿ ಮಾಡುತ್ತಾರೆ. ಶಿಷ್ಟಾಚಾರದಂತೆ ರಾಷ್ಟಗೀತೆ ಗಾಯನ, ಸಂವಿಧಾನ ಪೀಠಿಕೆ ಪಠನ ಮಾಡಲಾಗುವುದು ಹಾಗೂ ಕಾಡನ್ನು ಬೆಳೆಸುವ ಉದ್ದೇಶದಿಂದ ದಿನಾಚರಣೆ ಅಂಗವಾಗಿ ಮಕ್ಕಳು, ಸಾರ್ವಜನಿಕರು ಎಲ್ಲರೂ ಸೇರಿ ಗಿಡಗಳನ್ನು ನೆಡುವ ಕೆಲಸ ಮಾಡಲಾಗುವುದು. ಅಗತ್ಯ ವಾದ ಸಸಿಗಳನ್ನು ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಅವರು ಗಿಡಗಳನ್ನು ರಕ್ಷಿಸುವ ಕೆಲಸವೂ ಆಗಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಶರತ್ ಅನಂತಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಸಿಂಡಿಕೇಟ್ ಸದಸ್ಯರು ಹಾಜರಿದ್ದರು.

Leave a Comment

error: Content is protected !!