SHIVAMOGGA | ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆಯೊಂದು ಕುಸಿತಗೊಂಡ ಘಟನೆ ನಡೆದಿದೆ.
ಶಿವಮೊಗ್ಗದ ಮಿಳಘಟ್ಟದ ಕುಲುಶುಂಬಿ ಎನ್ನುವವರಿಗೆ ಸೇರಿದ ಮನೆ ಗೋಡೆ ಕುಸಿತವಾಗಿದ್ದು ಈ ಘಟನೆಯಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.
ಅದೃಷ್ಟಾವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಕುಟುಂಬಸ್ಥರ ಆಗ್ರಹಿಸಿದ್ದಾರೆ.