SHIVAMOGGA | ಭಾರಿ ಮಳೆ ಮುಂದುವರೆದ ಕಾರಣ ಹಾಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ಜು.20 ಶನಿವಾರ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕನ್ನು ಹೊರತುಪಡಿಸಿ ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ – ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ಗಳು ರಜೆ ಘೋಷಿಸಿದ್ದಾರೆ.