ಹಿರಿಯ ರಾಜಕಾರಣಿ ಕೆ.ಎಚ್. ಶ್ರೀನಿವಾಸ್ ಇನ್ನಿಲ್ಲ !

Written by Malnadtimes.in

Published on:

WhatsApp Group Join Now
Telegram Group Join Now

SHIVAMOGGA | ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌. ಶ್ರೀನಿವಾಸ್‌ (K.H Shrinivas) (86) ನಿಧನರಾಗಿದ್ದಾರೆ.

ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ (Janata parivar) ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ (Ramakrishna Hegde) ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ, ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.

ಶ್ರೀನಿವಾಸ್‌ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಇವರ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

1987-88ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿದ್ದರು. ಆನಂತರ ವಿಧಾನಪರಿಷತ್‌ಗೂ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದರು. ವಾಗ್ಮಿಯಾಗಿ ಗುರುತಿಸಿಕೊಂಡಿದ್ದರು. ರಾಜಕೀಯದಲ್ಲಿ ಈ ರೀತಿ ವೈವಿಧ್ಯಮಯ ವ್ಯಕ್ತಿತ್ವ ಇರುವವರು ಕಡಿಮೆ.

ಕನ್ನಡ ಬರಹಗಾರರಾಗಿದ್ದ ಅವರು ಕಾನುಗೋಡು ಮನೆ ಹಾಗೂ ಒಳಸೊನ್ನೆ ಹೊರಸೊನ್ನೆ ಕವನ ಸಂಕಲನವನ್ನು ಪ್ರಕಟಿಸಿದರು ಮತ್ತು ಜೀನ್ ಪಾಲ್ ಸಾರ್ತ್ರ ಅವರ ನಾಟಕವನ್ನು ಕನ್ನಡ ಭಾಷೆಗೆ ಅನುವಾದಿಸಿದರು. 1972 ರಲ್ಲಿ ಅವರು ರೋಟರಿ ಕ್ಲಬ್ ಆಫ್ ಇಂಡಿಯಾದ ಪ್ರಾಯೋಜಕತ್ವದಲ್ಲಿ ಅಮೆರಿಕದ ಮ್ಯಾಂಚೆಸ್ಟರ್‌ನಲ್ಲಿ ಅಧ್ಯಯನ ಪ್ರವಾಸವನ್ನು ಕೈಗೊಂಡರು.

ಅವರು 1978-80ರ ಅವಧಿಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಯುರೋಪ್, ಜಪಾನ್, ಮಲೇಷಿಯಾ, ಸಿಂಗಾಪುರದಲ್ಲಿ ಪ್ರವಾಸ ಮಾಡಿದ್ದು ಅವರ ವಿಶೇಷ. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಿಂದ ದೂರವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ಪತ್ನಿ ಹಾಗೂ ಪುತ್ರನೊಂದಿಗೆ ನೆಲೆಸಿದ್ದರು.

ಮೂವರು ಪುತ್ರಿಯರೂ ಶ್ರೀನಿವಾಸ್‌ ಅವರಿಗೆ ಇದ್ದಾರೆ. ಇವರೂ ಚಿತ್ರದಲ್ಲಿ ಅಭಿನಯಿಸಿದ್ದಾರೆ, ಅವರ ಪುತ್ರಿ ವೈಶಾಲಿ ಕೂಡ ಅಭಿನಯಿಸಿದ್ದರು.

Leave a Comment

error: Content is protected !!