SHIVAMOGGA | ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮತ ಎಣಿಕೆ ಪ್ರಕ್ರಿಯೆಗೆ ಆರಂಭವಾಗಿದ್ದು 23 ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ.
ಮತ ಎಣಿಕೆ ಪ್ರಕ್ರಿಯೆ 8 ಗಂಟೆಯಿಂದ ಆರಂಭವಾಗಿದ್ದು, ಭಾರಿ ಭದ್ರತೆಯಲ್ಲಿ ಅಧಿಕಾರಿಗಳು ಸ್ಟ್ರಾಂಗ್ ರೂಂ ಓಪನ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಇನ್ನೂ ಅಂಚೆ ಮತಗಳ ಎಣಿಕೆ ಆರಂಭಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ರವರಿಗೆ ಹಿನ್ನಡೆಯಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 5,199 ಅಂಚೆ ಮತಗಳು ಚಲಾವಣೆಯಾಗಿವೆ.
ಬಿ.ವೈ. ರಾಘವೇಂದ್ರ – ಬಿಜೆಪಿ – 2252 ಮತಗಳು
ಗೀತಾ ಶಿವರಾಜ್ಕುಮಾರ್ – ಕಾಂಗ್ರೆಸ್ : 2018 ಮತಗಳು
ಕೆ.ಎಸ್. ಈಶ್ವರಪ್ಪ – ಪಕ್ಷೇತರ : 260 ಮತಗಳು