ವಿ.ಪ. ಚುನಾವಣೆ ಎದುರಿಸಲು ಒಗ್ಗಟ್ಟಿನ ಶ್ರಮ ; ಮಾಜಿ ಸಚಿವ ಕುಮಾರ್ ಬಂಗಾರಪ್ಪ

Written by Malnadtimes.in

Published on:

WhatsApp Group Join Now
Telegram Group Join Now

ಸೊರಬ: ಕೇಂದ್ರಿಯ ಚುನಾವಣಾ ಸಮಿತಿಯು ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಶಿವಮೊಗ್ಗದ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರನ್ನು ಘೋಷಣೆ ಮಾಡಿದ್ದು, ಚುನಾವಣೆಯ ಯಶಸ್ವಿಗೆ ಒಗ್ಗಟ್ಟಿನಿಂದ ಶ್ರಮಿಸಲಾಗುವುದು ಎಂದು ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೆ ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿದೆ. ಪಕ್ಷದ ವತಿಯಿಂದ ಪದವೀಧರರನ್ನು ಗುರುತಿಸಿ ಪ್ರತಿ ಬೂತ್‍ನಲ್ಲಿಯೂ ಮತದಾರರ ಪಟ್ಟಿಗೆ ನೋಂದಣಿ ಮಾಡಿಸಲಾಗಿದೆ. ಕ್ಷೇತ್ರದಲ್ಲಿ ಸುಮಾರು 2.500 ಮತದಾರರಿದ್ದು, ಕಾರ್ಯಕರ್ತರು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಯ 2 ತಾಲೂಕುಗಳನ್ನು ಒಳಗೊಂಡಿದೆ. ಸುಮಾರು 43 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿದ್ದು, ಪದವೀಧರರ ಕ್ಷೇತ್ರದ ಚುನಾವಣೆಯು ಸಾರ್ವತ್ರಿಕ ಚುನಾವಣೆಗಿಂತ ಭಿನ್ನವಾಗಿದೆ ಎಂದರು.

ಅಭಿವೃದ್ಧಿ ಪರವಾದ ಚುನಾವಣೆಯಲ್ಲಿ ಬಿವೈಆರ್ ಗೆಲುವು ನಿಶ್ಚಿತ:
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯು ಜಿಲ್ಲೆಯಲ್ಲಿ ನಡೆದ ಅಭಿವೃದ್ಧಿ ಪರವಾದ ಚುನಾವಣೆಯಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ಚುನಾವಣೆಯ ಫಲಿತಾಂಶದ ತರುವಾಯ ರಾಜ್ಯ ಕಾಂಗ್ರೆಸ್ ಪತನವಾಗುವ ಸಂಭವವಿದೆ. ಕೆಲವರು ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಪಕ್ಷದ ಜೊತೆಗೆ ಇದ್ದಂತೆ ವರ್ತಿಸಿ, ಒಳಹೊಡೆತ ನೀಡಲು ಯತ್ನಿಸಿದರು. ಆದರೆ, ಇದ್ಯಾವುದನ್ನೂ ಲೆಕ್ಕಿಸದೇ ಮತದಾರರು ಬಿಜೆಪಿಯನ್ನು ಕೈ ಹಿಡಿದಿದ್ದಾರೆ. ಬಿ.ವೈ. ರಾಘವೇಂದ್ರ ಅವರು ಗೆಲುವು ಸಾಧಿಸುವುದು ನಿಶ್ಚಿತ. ಜೂನ್ 4ರಂದು ಫಲಿತಾಂಶ ಬರಲಿದೆ ರಾಜ್ಯದಲ್ಲಿ ಸುಮಾರು 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ಗೆ ಪ್ರತಿಭಟನೆಯ ಎಚ್ಚರಿಕೆ:
ರಾಜ್ಯ ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕ್ಷೇತ್ರವೂ ಸೇರಿದಂತೆ ರಾಜ್ಯದಲ್ಲಿ ಬರದಿಂದ ರೈತ ಸಮೂಹ ಕಂಗಾಲಾಗಿದೆ. ಪರಿಸ್ಥಿತಿಯೂ ಕೈ ಮೀರಿದೆ. ಕೊಳವೆಬಾವಿಗಳಲ್ಲೂ ನೀರಿಲ್ಲ. ರೈತರು ಬೆಳೆದ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು. ಬರ ನಿರ್ವಹಣೆಯನ್ನು ಸಮರ್ಥವಾಗಿ ಎದುರಿಸಬೇಕು. ಇಲ್ಲವಾದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‍ನ ಆಡಳಿತ ಲೋಪವನ್ನು ವಿರೋಧಿಸಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎಲ್ಲಾ ಸಮುದಾಯಗಳಿಗೆ ದ್ರೋಹ :
ಕ್ಷೇತ್ರದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿತ್ತು. ಪಟ್ಟಣದಲ್ಲಿ ವಿಸ್ತಾರ ಸೌಧ ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿತ್ತು. ಹಾಲಿ ಜನಪ್ರತಿನಿಧಿಗಳು ಜನತೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇವುಗಳನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ಇದೆ. ಕ್ಷೇತ್ರದ ಶಾಸಕರು ಎಲ್ಲಾಸಮುದಾಯವರಿಗೂ ಅನ್ಯಾಯ ಎಸಗುತ್ತಿದ್ದಾರೆ. ಈ ಹಿಂದೆ ಎಲ್ಲಾ ಸಮುದಾಯವರು ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಗಳ ನಿರ್ಮಿಸುವ ಗುರಿ ಹೊಂದಲಾಗಿತ್ತು. ಜೊತೆಗೆ ನಾರಾಯಣಗುರು ವಸತಿ ಶಾಲೆಗೆ 20 ಎಕರೆ ಜಾಗವನ್ನು ಮೀಸಲಿಡಲಾಗಿತ್ತು. ಆದರೆ, ಅದನ್ನು ಕೇವಲ 5 ಎಕರೆಗೆ ಇಳಿಸಲಾಗಿದೆ. ಇದು ಆ ಸಮುದಾಯಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಉಪಾಧ್ಯಕ್ಷ ದೇವೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಪ್ರಮುಖರಾದ ಗುರುಕುಮಾರ ಪಾಟೀಲ್, ಬಸವರಾಜ ಓಟೂರು, ಜಾನಕಪ್ಪ ಒಡೆಯರ್ ಯಲಸಿ, ಕೃಷ್ಣಮೂರ್ತಿ ಕೊಡಕಣಿ ಸೇರಿದಂತೆ ಇತರರಿದ್ದರು.

Leave a Comment

error: Content is protected !!