ಹೊಸನಗರ ; ಒಂದು ಕುಟುಂಬದಲ್ಲಿ ಹೆಣ್ಣು ಕುಟುಂಬದ ಎಲ್ಲ ಜವಾಬ್ದಾರಿಯನ್ನು ಹೊತ್ತುಕೊಂಡು ಅಚ್ಚುಕಟ್ಟಾದ ಸಂಸಾರ ನಡೆಸುತ್ತಾಳೆ. ಹಿಂದೆ ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ಮಾತ್ರ ನಿರ್ವಹಿಸುತ್ತಿದ್ದರೂ ಕಾಲ ಬದಲಾವಣೆಯದಂತೆ ಮಹಿಳೆಯು ಬದಲಾವಣೆ ಹೊಂದಿದ್ದಾರೆ ಕುಟುಂಬದ ಪ್ರತಿಯೊಂದು ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಅಚ್ಚುಕಟ್ಟಾದ ಸಂಸಾರ ನಡೆಸುವುದನ್ನು ನಾವು ನೀವೆಲ್ಲರೂ ನೋಡಿದ್ದೇವೆ, ನೋಡುತ್ತಿದ್ದೇವೆ. ಈ ಸಮಾಜದಲ್ಲಿ ಮಹಿಳೆಯರ ಪಾತ್ರ ಹಿರಿದಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತ್ಯ ರತ್ನ ಶಾಂತರಾಮ ಪ್ರಭು ಹೇಳಿದರು.
ಕಾರಣಗಿರಿ ವಲಯದ ತ್ರಿಣಿವೆ ಕಾರ್ಯಕ್ಷೇತ್ರದಲ್ಲಿ ವಾತ್ಸಲ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಸಂನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಮಹಿಳೆ ಒಂದು ಕುಟುಂಬವನ್ನು ಹೇಗೆ ನಿರ್ವಹಿಸಬೇಕು ಹಾಗೂ ಸಂಸ್ಕೃತಿ ಸಂಸ್ಕಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ತ್ರಿಣಿವೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸಗೌಡ ಮಾತನಾಡಿ, ಜ್ಞಾನವಿಕಾಸ ಕೇಂದ್ರದಿಂದ ನಮ್ಮ ಊರಿನ ಮಹಿಳೆಯರು ಬದಲಾವಣೆಯನ್ನು ಹೊಂದಿರುತ್ತಾರೆ ಎಂದು ತಿಳಿಸಿದರು.
ಒಕ್ಕೂಟದ ಅಧ್ಯಕ್ಷ ರಾಜೀವಶೆಟ್ಟಿ ಸಭೆಗೆ ಶುಭ ಹಾರೈಸಿದರು. ವಲಯದ ಮೇಲ್ವಿಚಾರಕರಾದ ಶ್ಯಾಮಲ ಕೇಂದ್ರವನ್ನು ಉತ್ತಮವಾಗಿ ನಡೆಸಿಕೊಂಡು ಹೋಗುವ ಬಗ್ಗೆ ವಿವರಿಸಿದರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶಾಂತಕುಮಾರಿ ಪ್ರಸ್ತಾವಿಕ ಮಾತನಾಡಿದರು. ಕೇಂದ್ರದ ಸದಸ್ಯರಾದ ಸೀತಮ್ಮ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು ನಮ್ಮ ಕೇಂದ್ರವನ್ನು ತಾಲೂಕಿನಲ್ಲಿ ಮಾದರಿ ಕೇಂದ್ರವನ್ನಾಗಿ ನಡೆಸಿಕೊಂಡು ಹೋಗೋಣ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸರಿತಾ ಉಪಸ್ಥಿತರಿದ್ದು ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು. ಕೇಂದ್ರ ಸದಸ್ಯರಾದ ಲತಾ ಅವರ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಸೇವಾ ಪ್ರತಿನಿಧಿ ಜಯಂತಿ, ಕೇಂದ್ರದ ಸದಸ್ಯರು ಭಾಗವಹಿಸಿದರು.







